
ಅಂಕೋಲಾ: ಗಂಗಾವಳಿ ಸೇತುವೆಯ ತಳಭಾಗದಲ್ಲಿ ಶುಕ್ರವಾರ ಮುಂಜಾನೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಸುಮಾರು 35 ವರ್ಷದ ವ್ಯಕ್ತಿಯ ಮೃತದೇಹ ನದಿ ದಡಕ್ಕೆ ತೇಲಿ ಬಂದಿದ್ದು, ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಕ್ರಮ ಕೈಗೊಳ್ಳಲಾಗಿದೆ. ಮೃತ ವ್ಯಕ್ತಿ ಕಾಣೆಯಾಗಿದ್ದವರಾಗಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಗುರುತು ಪತ್ತೆ ಹಾಗೂ ಸಾವಿನ ಕಾರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.










